ಆ.27ರಂದು ಬಂಟವಾಳ ಬಂಟರ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ
ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಬ್ರಹ್ಮರಕೊಟ್ಲವಿನಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ಆ.27 ರಂದು 11 ಗಂಟೆಗೆ ನಡೆಯಲಿದೆ.
ಬಂಟ್ವಾಳ ತಾಲೂಕಿನ ಎಲ್ಲಾ ಸಮಾಜದ ಸುಮಾರು 1,750 ವಿದ್ಯಾರ್ಥಿಗಳಿಗೆ ಸರಾಸರಿ 50 ಲಕ್ಷ ರೂ. ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದ್ದು, ಪ್ರತಿಭಾ ಪುರಸ್ಕಾರ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಮಂಗಳೂರು ಶಾಸಕ ಯು.ಟಿ.ಖಾದರ್, ಬಂಟ ಸಮಾಜದ 6 ಮಂದಿ ಶಾಸಕರು,2 ವಿಧಾನಪರಿಷತ್ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದು ಬಂಟವಾಳ ಬಂಟರ ಸಂಘದ ಪ್ರಕಟಣೆ ತಿಳಿಸಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಬೈ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಕೆ. ಶೆಟ್ಟಿ ಅವರು ನೆರವೇರಿಸಲಿದ್ದು, ಬಂಟವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದ ನಳಿನ್ ಕುಮಾರ್ ಕಟೀಲ್,ಮಾಜಿ ಸಚಿವ ರಮಾನಾಥ ರೈ,ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕರಾದ ಡಾ.ನೀಲ್ ರತನ್ ಶೆಂಡೆ,ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ದುಬೈ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.