ಬಂಟ್ವಾಳ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ  ಉಮ್ಮರ್ ಫಾರೂಕ್ ಬಂಧಿತ ಆರೋಪಿಯಾಗಿದ್ದಾನೆ.
ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ,ಕೋಣಾಜೆ,ಬರ್ಕೆ,ವಿಟ್ಲ,ಕಡಬ ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ  ಪ್ರಕರಣ ದಾಖಲಾಗಿದೆ.
ಶನಿವಾರ ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ  ಪೊಲೀಸರು ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. 

By suddi9

Leave a Reply

Your email address will not be published. Required fields are marked *