ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ
ಬಂಟ್ವಾಳ: ಪುಂಜಾಲಕಟ್ಟೆಯಲ್ಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ರವಿವಾರ ಭೇಟಿ ನೀಡಿದರು. ಶಾಲೆಯ ಪ್ರಾಂಶುಪಾಲರಾದ ಸಂತೋಷ ಕುಮಾರ್ ಹಾಗೂ ವಿದ್ಯಾರ್ಥಿಗಳು ಸಂಸದರನ್ನು ಸ್ವಾಗತಿಸಿದರು.
ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷರು ಹರಿಕೃಷ್ಣ ಬಂಟ್ವಾಳ, ಜಿಪಂ ಮಾಜಿ ಸದಸ್ಯ ತುಂಗಪ್ಪ ಬಂಗೇರ,ಬಂಟ್ಚಾಳ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ,ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪಿ.ಎಂ.ಪ್ರಭಾಕರ್, ಗಂಗಾಧರ್ ಪೂಜಾರಿ,ಬಿರುವೆರ್ ಕುಡ್ಲ ಅಧ್ಯಕ್ಷ ಉದಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಮನ್ ಕೀಭಾತ್ ವೀಕ್ಷಣೆ:
ಬಳಿಕ ಮಾಜಿ ಜಿಪಂ ಸದಸ್ಯ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರು, ಸ್ಥಳೀಯ ಕಾರ್ಯಕರ್ತರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.