ವಿಠಲ ಪದವಿ ಪೂರ್ವ ಕಾಲೇಜು:ರಾಷ್ಟ್ರೀಯ ಕ್ರೀಡಾ ದಿನಾಚರಣೆ
ವಿಟ್ಲ:ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಸ್ಮರಣಾರ್ಥ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಸಲಾಯಿತು.

ವಿವೇಕಾನಂದ ಕಾಲೇಜಿನಲ್ಲಿ ಕ್ರೀಡಾ ತರಬೇತುದಾರರಾಗಿರುವ ಕಾರ್ತಿಕ್ ಎನ್ ಇವರು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕೌಶಲ್ಯದಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಪ್ರಸ್ತುತ ಒತ್ತಡದ ಬದುಕಿನಲ್ಲಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕ್ರೀಡಾ ದಿನದ ವಿಶೇಷತೆಯನ್ನು ವಿವರಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸದಾಶಿವ ಬನ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಉಪನ್ಯಾಸಕಿ ಜಲಜಾಕ್ಷಿ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿಯವರು ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ ಗೌಡ ವಂದಿಸಿ ಸಹಕರಿಸಿದರು.