ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023
ಬಂಟ್ವಾಳ: ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರ ಹೊಮ್ಮಲು ಶಾಲಾ ಹಂತದಲ್ಲಿ ಮಾಡುವ ಪ್ರತಿಭಾ ಕಾರಂಜಿಗಳು ಸೂಕ್ತ ವೇದಿಕೆ ಆಗಿದೆ. ಮಕ್ಕಳು ಸ್ಪರ್ಧೆ ಎಂದು ಭಾವಿಸದೆ, ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ ನಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ಅವಕಾಶ ಎಂದು ಭಾವಿಸಿ ಎಂದು ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಲಿಖಿತ ಆರ್. ಶೆಟ್ಟಿ ಅವರು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮೂಹ ಸಂಪನ್ಮೂಲ ಕೇಂದ್ರ ಕಲ್ಲಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇದರ ಸಂಯುಕ್ತ ಆಶ್ರಯದಲ್ಲಿ
ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಕಲ್ಲಡ್ಕ ದ. ಕ. ಜಿ. ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023 ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಧುಸೂದನ್ ಐತಾಳ್ ವಹಿಸಿದ್ದರು.
ಇದೇ ವೇಳೆ ನೂತನವಾಗಿ ಆಯ್ಕೆಯಾದ ಗೋಳ್ತಮಜಲು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾದ ಪ್ರೇಮ ಪುರುಷೋತ್ತಮ್ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ, ಕಲ್ಲಡ್ಕ ಶ್ರೀಲಕ್ಷ್ಮೀ ನಿವಾಸ್ ಹೋಟೆಲ್ ನ ಮಾಲಕರಾದ ಶಿವರಾಂ ಹೊಳ್ಳ ಇವರನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯೆ ಲೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ಮೊದಲದವರು ಉಪಸ್ಥಿತರಿದ್ದರು.
ಕಲ್ಲಡ್ಕ ಕ್ಲಸ್ಟರ್ನ 12 ಶಾಲೆಗಳಿಂದ 300 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಶಾಲಾ ಪದವೀಧರ ಮುಖ್ಯ ಶಿಕ್ಷಕ ಅಬ್ಬುಬಕ್ಕರ್ ಅಶ್ರಫ್ ಸ್ವಾಗತಿಸಿ, ಕಲ್ಲಡ್ಕ ಕ್ಲಸ್ಟರ್ ಸಿ. ಆರ್. ಪಿ ಜ್ಯೋತಿ ವಂದಿಸಿದರು. ಸಹ ಶಿಕ್ಷಕಿ ಸೌಮ್ಯ ಎ ಕಾರ್ಯಕ್ರಮ ನಿರೂಪಿಸಿದರು.