ಶಾರದಾ ಪೂಜಾ ಮಹೋತ್ಸವ ಪೂರ್ವಭಾವಿ ಸಿದ್ಧತಾ ಸಭೆ
ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್ ಯುವಕ ಮಂಡಲ ಹಾಗೂ ಶ್ರೀ ಶಾರದ ಪೂಜಾ ಮಹೋತ್ಸವ ಸಮಿತಿ ವತಿಯಿಂದ ಸುಭಾಷ್ ನಗರ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 97ನೇ ವರ್ಷದ ಶಾರದಾ ಪೂಜಾ ಮಹೋತ್ಸವ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಸಜಿಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಸುಭಾಷ್ ಯುವಕ ಮಂಡಲದ ಅಧ್ಯಕ್ಷ ಎಸ್ .ಶ್ರೀಕಾಂತ್ ಶೆಟ್ಟಿ,ಸಜೀಪ ಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ಶಾರದಾ ಪೂಜಾ ಸಮಿತಿ ಅಧ್ಯಕ್ಷ ವಸಂತ ಪೂಜಾರಿ ಬರ್ಕೆ, ಪಂಚಾಯಿತಿ ಸದಸ್ಯ ಶ್ರೀನಾಥ್ ಶೆಟ್ಟಿ, ಪ್ರಹ್ಲಾದ್ ,ವಿಶ್ವನಾಥ್, ಚೆನ್ನಯ್ಯ ಪೂಜಾರಿ, ನಾಗೇಶ್, ದಿವ್ಯ ರಾಜು ಮೊದಲಾದವರು ಸಲಹೆ,ಸೂಚನೆ ನೀಡಿದರು.
ಶಾಲಾ ಮಕ್ಕಳಿಂದ ವಿವಿಧ ವಿನೋದವಳಿ, ಯಕ್ಷಗಾನ,ನಾಟಕ ವಿವಿಧ ಭಜನಾ ತಂಡಗಳಿಂದ ಭಜನೆ, ಅನ್ನದಾನ, ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.