ವಿಟ್ಲ ವಲಯದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2023-24
ವಿಟ್ಲ: ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ವಿಟ್ಲ ,ಸರಕಾರಿ ಪ್ರೌಢಶಾಲೆ ಆರ್.ಎಂ.ಎಸ್.ಎ ವಿಟ್ಲ ಇಲ್ಲಿ ಇಂದು 2023-24ನೇ ಸಾಲಿನ ವಿಟ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳದ ಶಿಕ್ಷಣ ಸಂಯೋಜಕರಾದ ಶ್ರೀಮತಿ ಸುಧಾ ನೆರವೇರಿಸಿದರು, ವೇದಿಕೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಬಿಂದು, ವಿಟ್ಲ ಪಟ್ಟಣ ಪಂಚಾಯತ್ ಕೌನ್ಸಿಲರ್ ರವಿಪ್ರಕಾಶ್ ವಿಟ್ಲ, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿಶಂಕರ್ ಸಿ, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರತಿನಿಧಿಯಾದ ಚಂದಳಿಕೆ,ಶಾಲಾ ಮುಖ್ಯಶಿಕ್ಷಕರು ವಿಶ್ವನಾಥ ಗೌಢ,ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಾರಿಜ ಕುಮಾರಿ,ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನ್ನಪೂರ್ಣ ವಂದಿಸಿದರು.