ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇವದ್ಯಾಸ ಧ್ಯಾನಮಂದಿರಲ್ಲಿ ಪೋಷಕರ ಸಭೆಯು ಪೂರ್ವ ಪ್ರಾಥಮಿಕ ಹಾಗೂ ಹಿರಿಯ ವಿಭಾಗವಾಗಿ ಎರಡು ಹಂತಗಳಲ್ಲಿ ನಡೆಯಿತು.

ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುವ ಉದ್ದೇಶದಿಂದ ೧ನೇ ತರಗತಿಯ ಆರು ವಿಭಾಗಗಳ ಗೋಡೆಗಳಲ್ಲಿಯೂ ಕೈಗೆಟಕುವ ಹಲವಾರು ಗ್ರೀನ್ ಬೋರ್ಡ್ ಅಳವಡಿಸಿದ್ದು, ಪ್ರತಿ ವಿದ್ಯಾರ್ಥಿಯೂ ಅದನ್ನು ಬಳಸುತ್ತಿದ್ದಾರೆ. ಇದು ಮಕ್ಕಳ ಮನಸ್ಸಿನಲ್ಲಿರುವ ಭಾವನೆಗೆ ದಾರಿ ಮಾಡಿ ಕೊಡುತ್ತದೆ. ಅಂತೆಯೇ ಮೊದಲಿನ ನಾಲ್ಕು ವರ್ಷ ಮಕ್ಕಳ ಕಡೆ ಪೂರ್ಣ ಪ್ರಮಾಣದಲ್ಲಿ ಗಮನ ಹರಿಸಲು ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಿಸಿದೆ ಎಂದರು.

ಪಾಠ ಹಾಗೂ ಪಠ್ಯೇತರ ಚಟುವಟಿಕೆಗೆ ಗಮನ ಕೊಡಲಾಗುತ್ತಿದ್ದು, ತಬಲ, ಯಕ್ಷಗಾನ, ಸಂಗೀತ, ಚಿತ್ರಕಲೆ ಕಲಿಸಿಕೊಡಲಾಗುತ್ತದೆ. ಜೊತೆಗೆ ಕ್ರೀಡೆ ಹಾಗೂ ಕಂಪ್ಯೂಟರ್ ಶಿಕ್ಷಣವನ್ನು ನೀಡಲಾಗುತ್ತಿದೆ. , ಪ್ರಸ್ತುತ ವಿದ್ಯಮಾನಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಲಾಗಿದೆ. ಈ ಶೈಕ್ಷಣಿಕ ವರ್ಷದಿಂದ ೧ನೇ ತರಗತಿಯಿಂದಲೇ ಸಂಸ್ಕೃತ ಕಲಿಕೆ ಆರಂಭಿಸಲಾಗಿದೆ. ಜೊತೆಗೆ ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಪೂರಿತವಾದ ವಾತಾರಣವನ್ನು ಕಲ್ಪಿಸಬೇಕು. ಶಾಲೆಯಲ್ಲಿ ಕಲಿಸುವ ಸಂಸ್ಕಾರವು ಮನೆಯಲ್ಲೂ ಪಾಲಿಸುವ ಕಡೆ ಪೋಷಕರು ಗಮನ ಹರಿಸಬೇಕು ಎಂದು ಡಾ.ಭಟ್ ಹೇಳಿದರು.

ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು. ಆಗಾಗ ಶಾಲೆಗೆ ಭೇಟಿ ನೀಡಿ ಅಧ್ಯಾಪಕರೊಂದಿಗೆ ಚರ್ಚಿಸಿ. ಪೋಷಕರು ಹಾಗೂ ಶಿಕ್ಷಕರು ಜೊತೆಗೂಡಿ ನಡೆದಾಗ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಾಗುತ್ತದೆ” ಎಂದು ಅವರು ಕಿವಿಮಾತು ಹೇಳಿದರು.

ಇದೇ ವೇಳೆ ಪೋಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ , ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯರಾದ ಚೆನ್ನಪ್ಪ ಆರ್ ಕೋಟ್ಯಾನ್ ಪ್ರಾಸ್ತಾವನೆಗೈದರು.
ಅಧ್ಯಾಪಕರಾದ ರೂಪಕಲಾ ಎಂ. ಸ್ವಾಗತಿಸಿ, ಸೌಮ್ಯಲತ ನಿರೂಪಿಸಿದರು. ಜಯಲಕ್ಷ್ಮೀ ವಂದಿಸಿದರು.