ದಡ್ಡಲಕಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ
ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗುರುವಾರ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವವನ್ನು ಸಮರ್ಪಿಸಿದರು .
ಈ ಸಂದರ್ಭದಲ್ಲಿ ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ್ ಅಂಚನ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಕರು ಹೆತ್ತವರಿಗೆ ಗೌರವವನ್ನು ಕೊಡುವುದನ್ನು ಕಲಿಯಬೇಕು ಹಾಗೂ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬದುಕಬೇಕು ಎಂದರು .
ಸಂಸ್ಥೆಯ ಮುಖ್ಯೋಪಾಧ್ಯಾಯರಾದ ರಮಾನಂದ ,ಪ್ರಾಥಮಿಕ ವಿಭಾಗದ ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ್ ಅಂಚನ್ ,ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ವಿನ್ನಿ ಸಿಂತೀಯಾ ಭಾಗವಹಿಸಿದರು.