ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆ
ಬಂಟ್ವಾಳ: ಮೂಡಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನೀಸ್ ನಲ್ಲಿ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ತಂಡವು ಚಾಂಪಿಯನ್ ಶಿಪ್ ಪಡೆದು ಶಿರಸಿಯಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡಿದೆ.
17ರ ವಯೋಮಾನದ ಬಾಲಕರ ಹಾಗೂ 14 ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದಿದೆ.ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಎಂ. ಚಂದ್ರ ಶೆಟ್ಟಿ, ವೇದಾವತಿ ಮತ್ತು ಶಿಕ್ಷಕ ಮುರಳೀಧರ ಆಚಾರ್ಯ ಉಪಸ್ಥಿತರಿದ್ದರು.