ಮಕ್ಕಳನ್ನು ದೇಶದ ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಮಂಗಳವಾರ ಮೊಡಂಕಾಪು ಇನ್ಫೆಂಟ್ ಜೀಸಸ್ ಚಚ್೯ ನ ಅನುಗ್ರಹ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ-2023 ಮತ್ತು ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ದೇಶದಲ್ಲಿ ಶಿಕ್ಷಕರಿಗೆ ಮಹತ್ತರವಾದ ಸ್ಥಾನಮಾನವಿದೆ,ಮಕ್ಕಳನ್ನು ಸರಿದಾರಿಯಲ್ಲಿ ಮುನ್ನಡೆಸಿ ದೇಶದ ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.
ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆಯುವ ರಾಷ್ಟ್ರೀಯ ಹಬ್ಬಗಳನ್ನು ಕಾಟಾಚಾರಕ್ಕೆ ಎಂಬಂತೆ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಶಿಕ್ಷಕರ ದಿನಾಚರಣೆ ಮಾತ್ರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕವಾಗಿ ಉಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.ಇದೇ ವೇಳೆ ನಿವೃತ್ತ ಹಾಗೂ ಪ್ರಶಸ್ತಿಪುರಸ್ಕೃತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಉಜಿರೆ ಎಸ್ ಡಿಎಂ ವಸತಿ ಶಾಲೆ ಡಾ.ಕೃಷ್ಣಮೂರ್ತಿ ಅವರು ಉಪನ್ಯಾಸ ನೀಡಿದರು.
ಮೊಡಂಕಾಪು ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ರೆ.ಫಾ.ವಲೇರಿಯನ್ ಡಿಸೋಜ,ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್,ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಘವೇಂದ್ರ ಬಳ್ಳಾಲ್,ಶಿಕ್ಷಕರ ದಿನಾಚರಣಾ ಸಮಿತಿಯ ಅಧ್ಯಕ್ಷ ನವೀನ್ ಪಿ.ಎಸ್, ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮುಖ್ಯಶಿಕ್ಷಕ ಮೆಲ್ವಿನ್ ಲೋಬೋ,ಡಯೆಟ್ ಉಪನ್ಯಾಸಕ ಶ್ರೀನಿವಾಸ ಅಡಿಗ,ಜೋಯೆಲ್,ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಾವತಿ,ಚಿತ್ರಕಲಾ ಶಿಕ್ಷಕರ ಸಂಘದ ಚೆನ್ನಕೇಶವ ಡಿ.ಆರ್ ವೇದಿಕೆಯಲ್ಲಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಸ್ವಾಗತಿಸಿ,ನಿವೃತ್ತ ಪ್ರಾಧ್ಯಾಪಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.