ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಬಂಟ್ವಾಳ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕ ನಾರಾಯಣ ನಾಯ್ಕ್ ರವರು ಮಾತನಾಡಿ “ಎರಡು ರೀತಿಯ ದೇವರು ಕಾಣಸಿಗುವ ಪವಿತ್ರ ಸ್ಥಳವೆಂದರೆ ಅದು ಶಾಲೆ,ಶಿಕ್ಷಕ ವೃತ್ತಿ ಎನ್ನುವುದು ಬಿಳಿ ಬಟ್ಟೆ ಇದ್ದಂತೆ ಅಂತಹ ಶುಭ್ರ ಬಟ್ಟೆಯಲ್ಲಿ ಒಂದು ಕಲೆಯೂ ಆಗದ ರೀತಿಯಲ್ಲಿ ಶಿಕ್ಷಕರು ತಮ್ಮ ವೃತ್ತಿಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಹೇಳುವ ಮೊದಲು ಶಿಕ್ಷಕರು ಅದನ್ನು ಪಾಲಿಸುವಂತಿರಬೇಕು.ಬಾಲವಿಕಾಸದ ಶಿಕ್ಷಕರು ಇಂತಹ ಗುಣಗಳಿಗೆ ಉತ್ತಮ ನಿದರ್ಶನವಾಗಿ ಕಾಣುತ್ತಾರೆ,ಇಲ್ಲಿನ ಶಿಕ್ಷಕರ ಸಂಸ್ಕಾರ ವಿದ್ಯಾರ್ಥಿಗಳ ಶಿಸ್ತಿನಲ್ಲಿ ಪ್ರತಿಬಿಂಬಿತವಾಗುತ್ತಿದೆ.ವಿದ್ಯಾರ್ಥಿಗಳು ಇಂತಹ ಶಿಕ್ಷಕರ ಮಾರ್ಗದರ್ಶನದಲ್ಲಿ ಶ್ರಮಪಟ್ಟು ಓದಿದರೆ ವಿದ್ಯಾಸರಸ್ವತಿಯನ್ನು ಒಲಿಸಿಕೊಳ್ಳಲು ಸಾಧ್ಯವಾಗುತ್ತದೆ ” ಎಂದರು.
![](https://www.suddi9.com/wp-content/uploads/2023/09/IMG-20230907-WA0083-1-650x334.jpg)
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ್ ಜೆ ಶೆಟ್ಟಿ ಯವರು ವಹಿಸಿದ್ದರು.
ಇದೇ ವೇಳೆ ಮುಖ್ಯ ಅತಿಥಿಯಾಗಿದ್ದ ನಾರಾಯಣ ನಾಯ್ಕ್ ರವರನ್ನು ಬಾಲವಿಕಾಸ ವಿದ್ಯಾಸಂಸ್ಥೆಯ ಪರವಾಗಿ ಅವರನ್ನು ಸನ್ಮಾನಿಸಲಾಯಿತು.
![](https://www.suddi9.com/wp-content/uploads/2023/09/IMG-20230907-WA0082-650x465.jpg)
ಶಾಲೆಯ ಆಡಳಿತಾಧಿಕಾರಿ ರವೀಂದ್ರ ದರ್ಬೆ,ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ ಶೆಟ್ಟಿ ಹಾಗೂ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ ಶೆಟ್ಟಿ,ಬಾಲವಿಕಾಸ ಟ್ರಸ್ಟ್ ನ ಉಪಾಧ್ಯಕ್ಷ ಯತಿರಾಜ್ ಕೆ ಎನ್ ಹಾಗೂ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನಾ ಆಟಗಳು ನಡೆಯಿತು.
ವಿದ್ಯಾರ್ಥಿನಿಯರಾದ ಅನಿಶಾ ಆರ್ ಮತ್ತು ಪ್ರಕೃತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಮೊಹಮ್ಮದ್ ಅಮೀರ್ ಸ್ವಾಗತಿಸಿ,ವೃದ್ಧಿ ಎ. ಕೊಂಡೆ ವಂದಿಸಿದರು.