ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ವಿಟ್ಲ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ ಮಂಗಳೂರು ಹಾಗೂ ವಿಟ್ಠಲ ಪದವಿಪೂರ್ವ ಕಾಲೇಜು ಇದರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ವಿಠಲ ಪದವಿಪೂರ್ವ ಕಾಲೇಜಿನ ಒಳಾಂಗಣ ಮೈದಾನದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯೋಜಕ ನಿತಿನ್ ಕೋಡಿಯ ಪಂದ್ಯಾಟವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ವಹಿಸಿದ್ದರು.ವಿಟ್ಠಲ ಎಜುಕೇಶನ್ ಸೊಸೈಟಿಯ ಕೋಶಾಧಿಕಾರಿ ಬಾಬು ಕೊಪ್ಪಳ,ಸದಸ್ಯರಗಳಾದ ನಿತ್ಯಾನಂದ ನಾಯಕ್ ಮತ್ತು ಸದಾಶಿವ ಬನ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಸ್ವಾಗತಿಸಿದರು.ಉಪನ್ಯಾಸಕಿ ಜ್ಯೋತಿ ಎಂ ವಂದಿಸಿ ನಿರೂಪಣೆ ಮಾಡಿದರು.