ಬಂಟ್ವಾಳ : ಭಜನಾ ಪರಿಷತ್ ಸಭೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 27 ರಿಂದ ನ. 4 ರ ತನಕ ನಡೆಯುವ ಭಜನಾ ಕಮ್ಮಟದ ಕುರಿತಂತೆ ಬಂಟ್ವಾಳ ಹಾಗೂ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಭಜನಾ ಪರಿಷತ್ ಸಭೆಯು ಬಂಟ್ವಾಳಲ್ಲಿರುವ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮಂಗಳವಾರ ನಡೆಯಿತು.
ಪ್ರಾದೇಶಿಕ ನಿರ್ದೇಶಕರಾದ ಪುರುಷೋತ್ತಮ ಪಿ.ಕೆ. ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟ ಹಾಗೂ ಭಜನಾ ಪರಿಷತ್ತಿನ ಬಲವರ್ಧನೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಭಜನಾ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ದಿನೇಶ್ ಎಂ,ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ,ಭಜನಾ ಪರಿಷತ್ ಕಾರ್ಯದರ್ಶಿ ಮುರಳಿ ಹಾಗೂ ತಾಲೂಕಿನ ಭಜನಾ ಮಂಡಳಿಯ ಅಧ್ಯಕ್ಷರು,ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.