ಬಂಟ್ವಾಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ
ಬಂಟ್ವಾಳ: ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಪಂದ್ಯಾಟ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎಸ್‌ಡಿಎಂಸಿ ಸದಸ್ಯರಾದ ದಿನಕರ, ಸೀತಾರಾಮ ಶೆಟ್ಟಿ ಅಗೊಳಿಬೆಟ್ಟು ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಸಜೀಪಮೂಡ ಗಾ,.ಪಂ. ಅಧ್ಯಕ್ಷೆ ಶೋಭಾಶೆಟ್ಟಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ರತ್ನಾವತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ನವೀನ್ ಪಿ.ಎಸ್., ಕೋಶಾಧಿಕಾರಿ ಜಯಪ್ರಕಾಶ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ರೈ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲೆ ಆಲಿಸ್ ಪಾಯಿಸ್ ಸ್ವಾಗತಿಸಿದರು, ಕ್ರೀಡಾ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಪ್ರಾಸ್ತವಿಕವಾಗಿ ಮಾತನಾಡಿದರು, ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ವಂದಿಸಿದರು, ಗಣೇಶ್ ಬಿ. ನಿರೂಪಿಸಿದರು.
ಬಾಲವಿಕಾಸ ಪ್ರಥಮ:
ಬಾಲಕರ ವಿಭಾಗದಲ್ಲಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಪ್ರಥಮ, ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ದ್ವಿತೀಯ ಹಾಗೂ ಬಾಲಕಿರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಪ್ರಥಮ ಸ್ಥಾನ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಮಣಿನಾಲ್ಕೂರು ದ್ವಿತೀಯ ಸ್ಥಾನ ಗೆದ್ದುಕೊಂಡಿದೆ.