ಬಂಟ್ವಾಳ: ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾದ ಡಾ. ಬಿ.ಆರ್ ಅಂಬೇಡ್ಕರ್ ಅವರ  ನಿರಂತರ ಅಧ್ಯಯನದಿಂದ ಮೂಡಿ‌ ಬಂದ ನಮ್ಮ ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಅಮೂಲ್ಯ ಆಸ್ತಿ.ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ನಮಗೆ ನಂಬಿಕೆ ಅರ್ಪಿಸಿಕೊಂಡ ಸಂವಿಧಾನವನ್ನು ಅದರ ಹಿರಿಮೆಯನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಬಂಟ್ವಾಳ ತಹಶೀಲ್ದಾರ್, ತಾಲೂಕು ದಂಡಾಧಿಕಾರಿಎಸ್. ಬಿ .ಕೂಡಲಗಿ ಅವರು ಅಭಿಪ್ರಾಯ ಪಟ್ಟರು.

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಅಶೋಕ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಿಂದಿಯಾ,
ಪಶು ವೈದ್ಯಾಧಿಕಾರಿ ಅವಿನಾಶ್ ಭಟ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರಾನಾಥ ಸಾಲಿಯಾನ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ದಿನೇಶ್ , ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಶಾಂಭವಿ, ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು , ಉಪತಹಸೀಲ್ದಾರ್ ರಾಜೇಶ್ ನಾಯ್ಕ್,ದಿವಾಕರ ಮುಗುಳಿಯ ಮತ್ತಿತರರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುನೀತಾ ಸ್ವಾಗತಿಸಿದರು.ಚುನಾವಣೆ ಶಾಖೆಯ ಉಪತಹಶೀಲ್ದಾರ್ ನವೀನ್ ಬೆಂಜನಪದವು ವಂದಿಸಿದರು. 

By suddi9

Leave a Reply

Your email address will not be published. Required fields are marked *