ಬೊಣ್ಯಕುಕ್ಕು: ಎರೆಹುಳ ಘಟಕ ಉದ್ಘಾಟನೆ, ಪೌಷ್ಟಿಕ ಆಹಾರ ಶಿಬಿರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಅಂಗನವಾಡಿ ಕೇಂದ್ರ ಬೊಣ್ಯಕುಕ್ಕು ಹಾಗೂ ಸ್ತ್ರೀ ಶಕ್ತಿ ಗುಂಪು ಬೊಣ್ಯಕುಕ್ಕು ಇದರ ಜಂಟಿ ಆಶ್ರಯದಲ್ಲಿ, ವೀರಕಂಬ ಗ್ರಾಮದ ಬೊಣ್ಯಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಎರೆಹುಳ ಘಟಕ ಉದ್ಘಾಟನೆ, ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಶಿಬಿರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ವೀರಕಂಭ ಗ್ರಾಮಪಂಚಾಯತ್ ಅಧ್ಯಕ್ಷೆ ಲಲಿತಾ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸೈನಿಕರಾದ ರಮೇಶ್ ನೂಜಿಪ್ಪಾಡಿ ಮಂಚಿ ಅವರು ಎರೆಹುಳ ಗೊಬ್ಬರ ತಯಾರಿ ಕುರಿತು ಮಾಹಿತಿ ನೀಡಿದರು. ಬಂಟ್ವಾಳ ಸಾಂತ್ವನಾ ಕೇಂದ್ರದ ಆಪ್ತ ಸಮಾಲೋಚಕರಾದ ವಿದ್ಯಾ ಅವರು ಸಾಂತ್ವನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು .

ಹಿರಿಯ ಮೇಲ್ವಿಚಾರಕಿ ರೂಪಕಲಾ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ನೀಡಿದರು ವೀರಕಂಭ ಗ್ರಾಮಪಂಚಾಯತ್ ನ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ನಿಶಾಂತ್,ನಿಕಟಪೂರ್ವ ಅಧ್ಯಕ್ಷರಾದ ದಿನೇಶ್, ನಿಕಟಪೂರ್ವ ಉಪಾಧ್ಯಕ್ಷರಾದ ಶೀಲಾ ನಿರ್ಮಲಾ ವೇಗಸ್ ,ಪಂಚಾಯತ್ ಸದಸ್ಯರಾದ ಸಂದೀಪ್ ವೇದಿಕೆಯಲ್ಲಿದ್ದರು.
ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಕಮರುನ್ನೀಸ,ಸಮಿತಿಯ ಸದಸ್ಯರು,ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಮಲ್ಲಿಕಾ, ಎಲ್ ಸಿ ಆರ್ ಪಿ ಜಯಂತಿ, ಆಶಾ ಕಾರ್ಯಕರ್ತೆ ಮೋಹಿನಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಅಂಗನವಾಡಿ ಸಹಾಯಕಿ ಸವಿತ ಭಾಗವಹಿಸದ್ದರು.
ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.