ಎಸ್ ಕೆಪಿಎ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ
ಬಂಟ್ವಾಳ: ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಇದರ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರಿಸಲಾಯಿತು.
ಬಂಟ್ವಾಳ ವಲಯದ ಅಧ್ಯಕ್ಷ ಹರೀಶ್ ಕುಂದರ್, ಕಾರ್ಯದರ್ಶಿ ರವಿ ಕಲ್ಪನೆ ಮತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಆನಂದ್ ಏನ್ ಬಂಟ್ವಾಳ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.
ಬಂಟ್ವಾಳ ವಲಯದ ನೂತನ ಅಧ್ಯಕ್ಷ ಕಿಶೋರ್ ಯಸ್ ಕುಮಾರ್, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಖಜಾಂಚಿ ವರುಣ್ ಕಲ್ಲಡ್ಕ , ಜಿಲ್ಲಾ ಪ್ರದಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳ ಪುತ್ತೂರು, ಉಪಾದ್ಯಕ್ಷರುಗಳಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಏನ್ ಸುಭ್ರಮಣ್ಯ, ಹಾಗೂ ಜಿಲ್ಲಾ ಸಮಿತಿ ಪದಾಧಿಕಾರಿಗಳು ಮತ್ತು 13 ವಲಯದ ಅಧ್ಯಕ್ಷರುಗಳು ಉಪಸ್ಥಿತರಿದ್ದರು.