ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ನಿಧನ
ಕೈಕಂಬ: ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು(೪೩) ಸೆ.೧೮ ಸೋಮವಾರ ಮೃತಪಟ್ಟಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಗುರುತಿಸಿಕೊಂಡಿದ್ದ ಪ್ರಕಾಶ್ ಬೆಳ್ಳೂರು ಅಮ್ಟಾಡಿ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

ಪ್ರಕಾಶ್ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಸೆ.೧೮ ಬೆಳಗ್ಗೆ ಔಷಧಿಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದು ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲೇ ಕುಸಿದು ಬಿದ್ದು ಮೃತರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಹಾಗೂ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಬಂದು ಸಂತಾಪ ಸೂಚಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಶಾಲಾಬಳಿ ಸೈಟ್ ನಿವಾಸಿ ಶ್ರೀ ಮತಿ ಲೀಲಾ ಜನಾರ್ಧನ್ ಅವರ ಪುತ್ರ ಪ್ರಕಾಶ್ ಹಲವು ಸಂಘ ಸಂಸ್ಥೆಯಲ್ಲಿ ಸ್ವಯಂ ಸೇವಕರಾಗಿ ದುಡಿದು ಇದೀಗ ಇಹಲೋಕ ತ್ಯಜಿಸಿದ್ದಾರೆ.ಅವರ ಅಂತ್ಯ ಕ್ರಿಯೆಯು ಬಡಗಬೆಳ್ಳೂರು ರುದ್ರಭೂಮಿಯಲ್ಲಿ ಸಂಜೆ 5:00 ಗಂಟೆಗೆ ನಡೆಯಲಿದೆ.