ವಿಶ್ವಕರ್ಮರು ಇಡೀ ಮಾನವ ಕುಲಕ್ಕೆ ಆರಾಧ್ಯರಾಗಿದ್ದಾರೆ : ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ವಾಸ್ತು ಶಿಲ್ಪ ಕೇತ್ರಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ವಿಶೇಷವಾಗಿದ್ದು,ಈ ಸಮಾಜದ ಕೌಶಲವನ್ನು ಬೆಂಬಲಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 13 ಸಾವಿರ ಕೋ.ರೂ.ಗಳ ಪಿ.ಎಂ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದಾರೆ.ಶ್ರೀ ವಿಶ್ವಕರ್ಮರು ಒಂದು ಸಮಾಜಕ್ಕೆ ಸೀಮಿತವಾಗದೆ ಇಡೀ ಮಾನವ ಕುಲಕ್ಕೆ ಆರಾಧ್ಯರಾಗಿದ್ದಾರೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

ಬಂಟ್ವಾಳ ಸಮೀಪದ ಅಜೆಕಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ನಡೆದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ವೇಳೆ ಉದ್ಯಮ ಕ್ಷೇತ್ರದ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಎಸ್ ಕೆಎಫ್. ಆಡಳಿತ ನಿರ್ದೇಶಕ ಡಾ| ರಾಮಕೃಷ್ಣ ಆಚಾರ್ ಅವರನ್ನು ಸನ್ಮಾನಿಸಲಾಯಿತು.

ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಅಧ್ಯಕ್ಷತೆ ವಹಿಸಿದ್ದರು.ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು.ಸಂಘದ ಗೌರವಾಧ್ಯಕ್ಷ ಮನೋಜ್ ಆಚಾರ್ಯ,ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಕಟಪಾಡಿ ಮಠದ ಗುರುಸೇವಾ ಪರಿಷತ್ತಿನ ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ಯುವರಾಜ ಆಚಾರ್ಯ,ವಿಶ್ವ ಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ,ಧಾರ್ಮಿಕ ಕಾರ್ಯದರ್ಶಿ ಕಳ್ಳಿಗೆ ನಾರಾಯಣ ಆಚಾರ್ಯ,ಉಪಾಧ್ಯಕ್ಷ ಯಶೋಧರ ಆಚಾರ್ಯ ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಬಿ.ಆಚಾರ್ಯ ಪ್ರಸ್ತಾವನೆಗೈದರು,ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ನಾಣ್ಯ,ಬಿ.ಆಚಾರ್ಯ ಸನ್ಮಾನಪತ್ರ ವಾಚಿಸಿದರು,ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ವಂದಿಸಿದರು,ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಭಜನಾ ಸಂಕೀರ್ತನೆ,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.