ಸರ್ಕಾರಿ ಕಾಲೇಜು ಸಿದ್ದಕಟ್ಟೆ- ರಾ.ಸೇ.ಯೋ. ದಿನಾಚರಣೆ
ಬಂಟ್ವಾಳ: ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾ.ಸೇ.ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು.
ಸಿದ್ಧಕಟ್ಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶೀನಪ್ಪ ಎನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಇದೇ ವೇಳೆ ೨೦೨೩-೨೪ ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಗಿರೀಶ ಭಟ್, ರಾಷ್ಟ್ರೀಯ ಸೇವಾ ಯೋಜನೆಯು ಮನುಷ್ಯರ ನಡುವೆ ಪರಸ್ಪರ ವಿಶ್ವಾಸವನ್ನು ಮೂಡಿಸುವ ಕೆಲಸ ಮಾಡುತ್ತದೆ ಮೌಲ್ಯಯುತ ದೃಷ್ಟಿಕೋನದೊಂದಿಗೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಲು ಸಹಕರಿಸುತ್ತದೆ ಎಂದು ತಿಳಿಸಿದರು.
ರಾ.ಸೇ.ಯೋಜನಾಧಿಕಾರಿ ಡಾ. ಸುಂದ್ರೇಶ ಎನ್,ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರಿಪ್ರಸಾದ್ ಬಿ ಶೆಟ್ಟಿ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಪ್ರೊ. ವಿನಯ್ ಎಂ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.