ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮವು ಪ್ರೇರಣಾ ಸಭಾ ಭವನದಲ್ಲಿ ನಡೆಯಿತು.

ಸಂತ ಫಿಲೋಮಿನಾ ಕಾಲೇಜ್ ನ ಪ್ರಾಧ್ಯಾಪಕರಾದ ರಾಧಾಕೃಷ್ಣ ಕೆದಿಲ ಕಾರ್ಯಕ್ರಮ ಉದ್ಘಾಟಿಸಿ,ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಮಹತ್ವ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿವಿಧ ಆಯಾಮಗಳ ಕುರಿತು ಮಾಹಿತಿ ನೀಡಿದರು.
ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.ಪ್ರಾಚಾರ್ಯರಾದ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ,ಯೋಜನಾಧಿಕಾರಿ ಯತಿರಾಜ್ ಪಿ,ಸಹ ಯೋಜನಾಧಿಕಾರಿ ದೀಕ್ಷಿತಾ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾದ ಮನ್ವಿತ,ಪದ್ಮಶ್ರೀ ಎನ್ ಎಸ್ ಎಸ್ ಗೀತೆ ಹಾಡಿದರು.ಸ್ವಯಂ ಸೇವಕರಾದ ಹಿತೇಶ್ ಸ್ವಾಗತಿಸಿ,ಯತೀಶ್ ಕಾರ್ಯಕ್ರಮ ನಿರೂಪಿಸಿದರು.