ಬಂಟ್ವಾಳ ಬಿಜೆಪಿಯಿಂದ “ನನ್ನ ದೇಶ ನನ್ನ ಮಣ್ಣು” ಕಾರ್ಯಕ್ರಮ
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯ “ನನ್ನ ದೇಶ ನನ್ನ ಮಣ್ಣು” ಎಂಬ ಭಾವನಾತ್ಮಕ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕ ಸಂತೋಷ್ ಕುಮಾರ್ ಬೋಳಿಯಾರ್ ನರೇಂದ್ರ ಮೋದಿಯವರ ಕಲ್ಪನೆಯ ಈ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿದರು.ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಸುಧೀರ್ ಶೆಟ್ಟಿ ಕಣ್ಣೂರು,ಕಸ್ತೂರಿ ಪಂಜ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ,ಹರಿಕೃಷ್ಣ ಬಂಟ್ವಾಳ ಹಾಗೂ ಪ್ರಮುಖರಾದ ದೇವದಾಸ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೆಹಲಿಯ ಕರ್ತವ್ಯ ಪಥದಲ್ಲಿ ಹುತಾತ್ಮ ಯೋಧರ ಗೌರವಾರ್ಥ ನಿರ್ಮಾಣವಾಗಲಿರುವ ಪವಿತ್ರ ಅಮೃತ ವನಕ್ಕಾಗಿ ಈ ಸಂದರ್ಭದಲ್ಲಿ ಬಂಟ್ವಾಳದ ಗ್ರಾಮ ಗ್ರಾಮಗಳ ಧಾರ್ಮಿಕ ಕ್ಷೇತ್ರಗಳಿಂದ ಪವಿತ್ರ ಮೃತಿಕೆಯನ್ನು ಸಮರ್ಪಿಸಲಾಯಿತು.
ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.
ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಸ್ವಾಗತಿಸಿ,ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.