ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ
ಬಂಟ್ವಾಳ: ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇವರ ಸಹಯೋಗದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಕಡೇಶಿವಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.

ಸಮ್ಮೇಳನದ ಸ್ವರೂಪ,ಶೈಕ್ಷಣಿಕ ಮತ್ತು ಸಾಹಿತ್ಯಕ ಉದ್ದೇಶಗಳನ್ನು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ಸಭೆಗೆ ನೀಡಿದರು.
ಸಮ್ಮೇಳನದ ಯಶಸ್ಸಿಗಾಗಿ ಸಭೆಯಲ್ಲಿ ಚರ್ಚಿಸಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು.ಸೈನಿಕ ಕಲ್ಯಾಣ ಇಲಾಖೆಯ ನಿವೃತ್ತ ಅಧೀಕ್ಷಕ ಬಿಳಿಯೂರು ಗುತ್ತು ಕಿಟ್ಟಣ್ಣ ಶೆಟ್ಟಿ ಕುರುಂಬ್ಲಾಜೆ ಗೌರವಾಧ್ಯಕ್ಷರನ್ನಾಗಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಹರಿಶ್ಚಂದ್ರ ಎಂ. ಕಾರ್ಯಾಧ್ಯಕ್ಷರನ್ನಾಗಿ, ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಉಪಾಧ್ಯಕ್ಷರಾಗಿ ನಿವೃತ್ತ ಮುಖ್ಯಶಿಕ್ಷಕ ಗಿರಿಯಪ್ಪ ಗೌಡ,ಪ್ರಧಾನ ಕಾರ್ಯದರ್ಶಿಯಾಗಿ ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೆ., ಉಪಕಾರ್ಯದರ್ಶಿಯಾಗಿ ಮಮತಾ ಪೆರ್ಲಾಪು,ಕೋಶಾಧಿಕಾರಿಯಾಗಿ ಮಾಧವ ರೈ ಅಮೈ ಭಂಡಸಾಲೆ, ಜೊತೆ ಕಾರ್ಯದರ್ಶಿಯಾಗಿ ಈಶ್ವರ ಪೂಜಾರಿ ಹಿರ್ತಡ್ಕ ಆಯ್ಕೆಯಾಗಿರುವರು.ಡೆಸೆಂಬರ್ ನ ಮೊದಲ ವಾರದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದ್ದು ಉಪಸಮಿತಿಗಳನ್ನು ರಚಿಸಲಾಯಿತು.
ಗ್ರಾ. ಪಂ. ಅಧ್ಯಕ್ಷೆ ಭಾರತಿ ಎಸ್.ರಾವ್, ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಸಲಹೆ ನೀಡಿದರು.ಕಡೇಶಿವಾಲಯ ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಬಿ. ಶೆಟ್ಟಿ,ಕಡೇಶಿವಾಲಯ ಸಿ.ಆರ್.ಪಿ. ಸುಧಾಕರ್ ಭಟ್,ಬಾಳ್ತಿಲ ಸಿ.ಆರ್.ಪಿ ಸತೀಶ್ ರಾವ್,ಶಿಕ್ಷಕರಾದ ಅನಿತಾ,ಜ್ಯೋತಿ,ಸ್ವಾತಿ,ದೀಪ್ತಿ,ನಿಶಾ,ದಿವ್ಯಶ್ರೀ,ಮಮತಾ,ಭಾಸ್ಕರ ನಾಯ್ಕ್,ವಿರಾಜ್ ವಾಬಳೆ ಉಪಸ್ಥಿತರಿದ್ದರು.
ಶಿಕ್ಷಕಿ ಪ್ರೇಮ ಬಾಬು ಪೂಜಾರಿ ಸ್ವಾಗತಿಸಿದರು.ಮಕ್ಕಳ ಕಲಾ ಲೋಕದ ಉಪಾಧ್ಯಕ್ಷ ಶಿವರಾಮ ಭಟ್ ನೆಡ್ಲೆ ನಿರೂಪಿಸಿ,ಕಾರ್ಯದರ್ಶಿ ಪುಷ್ಪಾ ವಂದಿಸಿದರು.