ಬಂಟ್ವಾಳ:ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವವು ಗುರುವಾರ ಸಂಭ್ರಮ ಸಡಗರದಿಂದ ನಡೆಯಿತು.
ಬೆಳಿಗ್ಗೆ ಪಂಚಾಮೃತ ಅಭಿಷೇಕ, ಪವಮಾನ ಆಭಿಷೇಕ, ಸಾಮೂಹಿಕ ಆಶ್ಲೇಷ ಬಲಿ, ಸ್ಕಂದಯಾಗ, ದೇವರ ಬಲಿ ಉತ್ಸವ ಹಾಗೂ ಇಲ್ಲಿನ ನಾಗಬ್ರಹ್ಮ ಸುಬ್ರಹ್ಮಣ್ಯ ಭಜನಾ ಮಂಡಳಿ ತಂಡದ ಸದಸ್ಯರ ಆಕರ್ಷಕ ಭಜನೆಯೊಂದಿಗೆ ದೇವರ ಪಲ್ಲಕಿ ಉತ್ಸವ ನಡೆಯಿತು.
27btl-badanadi

27btl-badanadi-1
ಇದೇ ವೇಳೆ ಬ್ರಹ್ಮಲಿಂಗೇಶ್ವರ ದೇವರಿಗೆ ಏಕದಶ ರುದ್ರಾಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ರಾತ್ರಿ ದುರ್ಗಾ ನಮಸ್ಕಾರ ಪೂಜೆ ಸಹಿತ ಪರಿವಾರ ದೈವಗಳಾದ ಮೈಸಂದಾಯ, ರಕ್ತೇಶ್ವರಿ, ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ನೇಮೋತ್ಸವದಲ್ಲಿ ಅಪಾರ ಮಂದಿ ಭಕ್ತರು ಪಾಲ್ಗೊಂಡರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸುಂದರ ರಾವ್, ಅರ್ಚಕ ಎಸ್. ನಾಗೇಶ ರಾವ್, ಸಮಿತಿ ಸದಸ್ಯರಾದ ಆನಂದ ಪೂಜಾರಿ ಅಂತರ, ಮೋಹನ್ ಕೆ.ಶ್ರೀಯಾನ್, ರವೀಂದ್ರ ಪೂಜಾರಿ, ದಿನೇಶ ಸಾಲಿಯಾನ್, ರಶ್ಮಿತ್ ಶೆಟ್ಟಿ ಕೈತ್ರೋಡಿ, ವನಿತಾ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರಕ್ಕೆ ಭೇಟಿ:
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಸ್ಥಳೀಯ ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿ ಪ್ರಸಾದ ಸ್ವಿಕರಿಸಿದರು.

By suddi9

Leave a Reply

Your email address will not be published. Required fields are marked *