ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಾಧನ,ಸಲಕರಣೆಗಳ ವಿತರಣೆ
ಬಂಟ್ವಾಳ: ವಿಶೇಷ ಚೇತನ ವಿದ್ಯಾರ್ಥಿಗಳನ್ನು ಯಾವುದೇ ಕಾರಣಕ್ಕೂ ಮುಖ್ಯ ವಾಹಿನಿಯಿಂದ ಹಿಂದೆ ಉಳಿಸದೆ,ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕು,ಆ ವಿದ್ಯಾರ್ಥಿಗಳ ವೈದ್ಯಕೀಯ ಸೌಲಭ್ಯಗಳ ಅಗತ್ಯತೆಯನ್ನು ಗಮನಕ್ಕೆ ತಂದರೆ ಉಚಿತವಾಗಿ ಮಾಡಿಸಿಲಾಗುವುದು ಎಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಹೇಳಿದ್ದಾರೆ.
ಬಂಟ್ವಾಳ ಶಿಕ್ಷಣ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸೋಮವಾರ ನಡೆದ ಗಾಂಧೀ ಜಯಂತಿ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿವಿಧ ಸಾಧನ,ಸಲಕರಣೆಗಳ ವಿತರಿಸಿ ಅವರು ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿ,ಶಾಲಾ ಶಿಕ್ಷಣದಿಂದ ಮಕ್ಕಳು ಹೊರಗುಳಿಯದೆ ಎಲ್ಲರೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕೆಂದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್ ಕೆ ಎಸ್ ರವರು ವಿಶೇಷ ಚೇತನ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರಲು ಇದು ಪ್ರೋತ್ಸಾಹದಾಯಕವಾಗಿದೆ ಎಂದರು.
ಪಶು ವೈದ್ಯಾಧಿಕಾರಿ ಡಾ. ಅವಿನಾಶ್,ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಲ.ಪ್ರಶಾಂತ್ ಕೋಟ್ಯಾನ್,ಸದಸ್ಯ ಲ.ಸತ್ಯನಾರಾಯಣ ರಾವ್ ರವರು ಉಪಸ್ಥಿತರಿದ್ದರು.
ಪ್ರಶಾಂತ್ ಸ್ವಾಗತಿಸಿದರು.ರವೀಂದ್ರ ವಂದಿಸಿದರು.ಸುರೇಖಾ ಯಳವಾರ ಕಾರ್ಯಕ್ರಮದ ನಿರೂಪಿಸಿದರು.