ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಸಮೂಹ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ
ಬಂಟ್ವಾಳ: ಮಹಾತ್ಮ ಗಾಂಧಿಜೀಯವರು ಸರಳ ಜೀವನಕ್ಕೆ ಮಾದರಿ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳಾದ ಎಸ್.ವಿ.ಎಸ್. ಪದವಿ ಕಾಲೇಜು ಮತ್ತು ಎಸ್.ವಿ.ಎಸ್ ಪ.ಪೂ. ಕಾಲೇಜುಗಳ ಎನ್.ಸಿ.ಸಿ. ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಎಸ್.ವಿ.ಎಸ್. ಪ.ಪೂ. ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ.,ಎನ್.ಸಿ.ಸಿ ಅಧಿಕಾರಿ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ,ಎಸ್.ವಿ.ಎಸ್. ಪ.ಪೂ. ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಲಕ್ಷ್ಮೀನಾರಾಯಣ ಕೆ.,ಎಸ್.ವಿ.ಎಸ್. ಪ.ಪೂ. ಕಾಲೇಜಿನ ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು,ಎನ್.ಸಿ.ಸಿ. ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಎನ್.ಸಿ.ಸಿ. ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಂದ ಗಾಂಧಿ ಜಯಂತಿ ಪ್ರಯುಕ್ತ ಕಾಲೇಜು ಕ್ಯಾಂಪಸ್ ಆಸುಪಾಸಿನಲ್ಲಿ ಸ್ವಚ್ಚತಾ ಹೀ ಸೇವಾ ಯೋಜನೆಯಡಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಎಸ್.ವಿ.ಎಸ್ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಹೆಚ್.ವಿ. ಕಾಶಿನಾಥ್ ಶಾಸ್ತ್ರೀ ವಂದಿಸಿದರು.ಎಸ್.ವಿ.ಎಸ್ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶಶಿಧರ್ ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.