ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಬಂಟ್ವಾಳ : ಇಲ್ಲಿನ ಪೆರಾಜೆ,ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ,ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಜೆ ಶೆಟ್ಟಿ,”ಮಹಾತ್ಮ”ಎಂಬ ಬಿರುದು ಪಡೆದ ಏಕೈಕ ರಾಜಕೀಯ ನಾಯಕ ಮಹಾತ್ಮಾ ಗಾಂಧಿ,ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ತ್ಯಾಗ ಮಾಡಿದ ಸರಳ ಜೀವಿ.ಭಾರತದ ಜವಾಬ್ದಾರಿಯುತ ನಾಗರಿಕರಾದ ನಾವು ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.
ಶಾಲೆಯ ಆಡಳಿತಾಧಿಕಾರಿಯಾದ ರವೀಂದ್ರ ದರ್ಬೆ,ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ ಶೆಟ್ಟಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿನಿಯರಾದ ಸ್ಪರ್ಶ ಎನ್ ಜಿ ಹಾಗೂ ಪ್ರಗತಿ ದಿನದ ಮಹತ್ವವನ್ನು ತಿಳಿಸಿದರು.ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.
ವಿದ್ಯಾರ್ಥಿನಿಯರಾದ ನಿವ್ಯ ರೈ ಸ್ವಾಗತಿಸಿ,ದಿಶಾ ವಂದಿಸಿದರು.ವೃದ್ಧಿ ಎ ಕೊಂಡೆ ಮತ್ತು ಪ್ರೇಕ್ಷ ಕಾರ್ಯಕ್ರಮ ನಿರೂಪಿಸಿದರು.