ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಮುಂಬೈಯಲ್ಲಿ ಏಳನೇ ಪೂರ್ವಭಾವಿ ಸಭೆ
ಮುಂಬೈ:ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ, ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅ. 28 ರಂದು “ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾ ಕೂಟ” ಮತ್ತು ಅ.29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ “ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆ”ಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮಗಳ ಕುರಿತ ಏಳನೇ ಪೂರ್ವಭಾವಿ ಸಭೆಯು ಮಧ್ಯಾಹ್ನ 2 ಗಂಟೆಗೆ ಬಂಟರ ಸಂಘ ಮುಂಬೈಯಲ್ಲಿ ಜರಗಿತು.

ಸಭೆಯಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು, ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು, ಕೋಶಾಧಿಕಾರಿ ಶ್ರೀ ಉಳ್ತುರು ಮೋಹನದಾಸ್ ಶೆಟ್ಟಿ, ಒಕ್ಕೂಟದ ವಿಶೇಷ ಮಹಾ ನಿರ್ದೇಶಕರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿ, ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿ, ಶ್ರೀ ಜಯ ಎ. ಶೆಟ್ಟಿ,ಒಕ್ಕೂಟದ ಪೋಷಕ ಸದಸ್ಯರು ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾದ ಶ್ರೀ ಗಿರೀಶ್ ಶೆಟ್ಟಿ ತೆಳ್ಳರ್, ಶ್ರೀ ಪ್ರವೀಣ್ ಶೆಟ್ಟಿ ವರಂಗ ಇವರುಗಳು ಉಪಸ್ಥಿತರಿದ್ದರು. ಸಭೆಯಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆಸಲಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.