ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ‘ಗಾಂಧಿ ಚಿಂತನೆಗಳ ಪ್ರಸ್ತುತತೆ’ ಉಪನ್ಯಾಸ ಕಾರ್ಯಕ್ರಮ
ಬಂಟ್ವಾಳ: ಗಾಂಧೀಜಿ ಸತ್ಯ,ಅಹಿಂಸೆ,ಸರಳತೆಯ ಗುಣಗಳಿಂದ ವಿಶ್ವಮಾನ್ಯರಾಗಿದ್ದಾರೆ.ತತ್ವ, ಆದರ್ಶಗಳನ್ನು ಅರಿತು,ಅಳವಡಿಸಿಕೊಂಡು ಹೋಗಬೇಕು ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಕೆ.ಎಸ್. ಹೇಳಿದರು.

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಅಧ್ಯಯನ ಕೇಂದ್ರ ಆಯೋಜಿಸಿದ್ದ ‘ಗಾಂಧಿ ಚಿಂತನೆಗಳ ಪ್ರಸ್ತುತತೆ’ ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಸ್.ವಿ.ಎಸ್. ಕಾಲೇಜು ಪ್ರಾಂಶುಪಾಲ ಡಾ.ಸುಯೋಗ ವರ್ಧನ್ ಡಿ.ಎಂ. ಅಧ್ಯಕ್ಷತೆ ವಹಿಸಿ ಗಾಂಧೀಜಿಯವರ ವಿಚಾರಗಳು ಸಾರ್ವಕಾಲಿಕವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಶಿವಣ್ಣ ಪ್ರಭು ಕೆ ಮತ್ತಿತರರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಶ್ರದ್ಧಾ ಮತ್ತು ತುಳಸಿ ಗಾಂಧಿ ಚಿಂತನೆಗಳ ಕುರಿತು ಅಭಿಪ್ರಾಯ ಮಂಡಿಸಿದರು.
ಗಾಂಧಿ ಅಧ್ಯಯನ ಕೇಂದ್ರ ಅಧ್ಯಕ್ಷರು,ಕನ್ನಡ ಸಹಾಯಕ ಪ್ರಾಧ್ಯಾಪಕ ಮನೋಹರ ಶಾಂತಪ್ಪ ದೊಡ್ಡಮನಿ ಸ್ವಾಗತಿಸಿ,ವಿದ್ಯಾರ್ಥಿನಿ ನವ್ಯಾ ಕಾರ್ಯಕ್ರಮ ನಿರೂಪಿಸಿದರು.ಉಪನ್ಯಾಸಕಿ ಸಂಪ್ರೀತಾ ಕೆ. ವಂದಿಸಿದರು.