ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿ: ಮಹಾಬಲ ಕುಲಾಲ್
ಬಂಟ್ವಾಳ: ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ದುಶ್ಚಟಗಳ ಬಗ್ಗೆ ಜನಜಾಗೃತಿ ಮೂಡಿಸಿದಾಗ ಸಮೃದ್ಧ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದ್ದಾರೆ.

ಬಂಟ್ವಾಳ ತಾಲೂಕಿನ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಗ್ಗ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಏರ್ಪಡಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನ ಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಯೋಜನಾಧಿಕಾರಿ ಮಾಧವ ಗೌಡ, ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ,ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ ಗಟ್ಟಿ ಮತ್ತಿತರರು ಇದ್ದರು.
ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.ಉಪನ್ಯಾಸಕಿ ಗ್ರೇಸಿ ಕಾರ್ಯಕ್ರಮ ನಿರೂಪಿಸಿದರು.