ದಡ್ಡಲಕಾಡು: ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥ
ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಜಾಥವನ್ನು ಹಮ್ಮಿಕೊಳ್ಳಲಾಯಿತು.
ಸಂಸ್ಥೆಯ ಬುಲ್ ಬುಲ್ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳೊಂದಿಗೆ ಸೇರಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭ ಸಂಸ್ಥೆಯ ಪ್ರೌಢ ಶಾಲಾ ವಿಭಾಗದ ಎಸ್. ಡಿ .ಎಂ .ಸಿ ಅಧ್ಯಕ್ಷ ಪುರುಷೋತ್ತಮ್ ಅಂಚನ್,ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್,ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ವಿನ್ನಿ ಸಿಂತಿಯಾ ಉಪಸ್ಥಿತರಿದ್ದರು.
ಇದೇ ವೇಳೆ ಸಂಸ್ಥೆಯ ಕಟ್ಟಡ ಕಾಮಗಾರಿ ವೀಕ್ಷಣೆಗಾಗಿ ಬಂದಿದ್ದ ಜಿಲ್ಲಾ ಪಂಚಾಯತ್ ನ ಮುಖ್ಯ ಇಂಜಿನಿಯರ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಬುಲ್ ಬುಲ್ ತಂಡದ ಕಾರ್ಯವನ್ನು ಪ್ರಶಂಸಿದರು.