ಗುಬ್ಬಚ್ಚಿ ಗೂಡು ಜಾಗೃತಿ; ವಿದ್ಯಾರ್ಥಿಗಳೊಂದಿಗೆ ಸಂವಾದ
ಬಂಟ್ವಾಳ: ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿ.ಪ್ರಾ ಶಾಲೆ ಪಿಲಿಮೊಗರು ಇಲ್ಲಿ ಗುಬ್ಬಚ್ಚಿಗೂಡು ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯ ರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಉಚಿತವಾಗಿ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಪ್ರಾತ್ಯಕ್ಷಿಕೆ ಮೂಲಕ ನೀರು,ಆಹಾರ ಇಡುವ ಕ್ರಮಗಳನ್ನು ವಿವರಿಸಿದರು.ಪ್ರಭಾರ ಮುಖ್ಯ ಶಿಕ್ಷಕಿ ಪ್ರಭಾವತಿ ಪಿ. ಕಾರ್ಯಕ್ರಮ ನಿರೂಪಿಸಿ,ಶಿಕ್ಷಕಿ ಉಷಾ ವಂದಿಸಿದರು.