ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕು. ಸಾನ್ವಿ ಸುವರ್ಣ
ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ. 06 ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ಕು. ಸಾನ್ವಿ ಸುವರ್ಣ ಆಯ್ಕೆಯಾಗಿದ್ದಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿಗಳ ಪುತ್ರಿ. ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುತ್ತಾರೆ.
ಶಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು, ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೊಗ್ರಾಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ಹೇಳಿದ್ದಾರೆ.
ಸಮ್ಮೇಳನದಲ್ಲಿ ತಾಲೂಕಿನ 18ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ.