ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರ್ ವಿಧಿವಶ
ಕಾರ್ಕಳ: ಪತ್ರಕರ್ತ, ಸಾಹಿತಿ, ಲೇಖಕ ಶೇಖರ್ ಅಜೆಕಾರ್(54) ಅ.31 ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಶೇಖರ್ ಅಜೆಕಾರ್ ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿ, ಮುಂಬೈನ ʼಕರ್ನಾಟಕ ಮಲ್ಲʼ, ಜನ್ವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಹಾಗೂ ಉಷಾಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.
10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು.
ಸಾಹಿತ್ಯದ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದ ಶೇಖರ್ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಇವರು ಇಪ್ಪತ್ತೆರಡು ಪುಸ್ತಕಗಳನ್ನು ಬರೆದಿದ್ದಾರೆ.
ಉಡುಪಿ ಜಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಆಮಂತ್ರಣ ಪ್ರಶಸ್ತಿ 2019, ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ರಾಷ್ಟ್ರೀಯ ಬಸವ ಶ್ರೀ ಪ್ರಶಸ್ತಿ 2018, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಖಾ ಭಾರತ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಇವರು ಪತ್ನಿ, ಓರ್ವ ಮಗ, ಓರ್ವ ಮಗಳನ್ನು ಅಗಲಿದ್ದಾರೆ.