ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ಅಸ್ತಂಗತ
ಕೈಕಂಬ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವರ ತಂದೆ ಪ್ರಗತಿಪರ ಕೃಷಿಕ, ಧಾರ್ಮಿಕ ಮುಂದಾಳು, ಕಂಬಳ, ಶಕ್ಷಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ(106) ಅಲ್ಪ ಕಾಲದ ಅನಾರೋಗ್ಯದಿಂದ ಅ.31 ಮಂಗಳವಾರ ಮಧ್ಯಾಹ್ನದ ವೇಳೆ ಸ್ವರ್ಗಸ್ಥರಾದರು.
ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ಅ.31ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ಮೋಹನ್ ಆಳ್ವ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.