Published On: Wed, Nov 1st, 2023

ವೀರಕಂಬ: ಶಾಲಾ ಸಮುದಾಯದತ್ತ ಕಾರ್ಯಕ್ರಮ

ಬಂಟ್ವಾಳ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿ ಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು ಆಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿ ಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದ್ದಾರೆ.

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ ಬಿ, ಸಂಗೀತ ಶರ್ಮಾ ಪಿ ಜಿ, ಅನುಷಾ, ಮುರ್ಷಿದ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.                       
ಶಿಕ್ಷಕಿ ಮಮತಾ ಸ್ವಾಗತಿಸಿ, ಶಿಕ್ಷಕಿ ಮುರ್ಷಿದ ಬಾನು ವಂದಿಸಿದರು, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter