ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್. ದೇವಳ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶ್ರೀನಿಧಿ ಪಿ.ಎಸ್. ಇವರು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
