ತ್ರಿವೇಣಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ
ಕೈಕಂಬ: ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಎಡಪದವು ಗ್ರಾಮ ಪಂಚಾಯತ್ ಇವರ ಸಹಕಾರದೊಂದಿಗೆ ತ್ರಿವೇಣಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ) ಇದರ ವಾರ್ಷಿಕ ಮಹಾಸಭೆಯು ಎಡಪದವು ಸ್ತ್ರೀ ಶಕ್ತಿ ಭವನದಲ್ಲಿ ಸೋಮವಾರ ಜರಗಿತು.
ಒಕ್ಕೂಟದ ಅಧ್ಯಕ್ಷೆ ಕಲ್ಯಾಣಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಸೂಯ ಭಂಡಾರಿ, ಉಪಾಧ್ಯಕ್ಷ ಗೋಪಾಲ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸುಕುಮಾರ್ ದೇವಾಡಿಗ ಸಭೆಯಲ್ಲಿ ಮಾತನಾಡಿದರು.
ಒಕ್ಕೂಟದ ಮಂಗಳೂರು ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುಭ್ರಮಣ್ಯ ನಾಯ್ಕ್ ಪ್ರಾಸ್ತಾವಿಕ ಮಾತನ್ನಾಡಿದರು.
ಗ್ರಾಮ ಪಂಚಾಯತ್ ಸದಸ್ಯರು, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಮಂಗಳೂರು ಗ್ರಾಮಾಂತರ ಅಂಗನವಾಡಿಗಳ ಮೇಲ್ವಿಚಾರಕಿ ಮಾಲಿನಿ, ಪಂಚಾಯತ್ ಕಾರ್ಯದರ್ಶಿ ಇಸ್ಮಾಯಿಲ್ ಎಂ. ಎಸ್. ಉಪಸ್ಥಿತರಿದ್ದರು.
ಒಕ್ಕೂಟದ ಅಧ್ಯಕ್ಷೆ ಮತ್ತು ಕಾರ್ಯದರ್ಶಿಯವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಒಕ್ಕೂಟದ ಪದಾಧಿಕಾರಿಗಳು, ಸಂಜೀವಿನಿ ಸ್ತ್ರೀ ಶಕ್ತಿ, ನವೋದಯ ಗುಂಪುಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ದೀಕ್ಷಿತಾ ಸ್ವಾಗತಿಸಿದರು. ಕಾರ್ಯದರ್ಶಿ ದೇವಕಿ ವರದಿ ಮಂಡಿಸಿದರು. ತಾಲೂಕು ವಲಯ ಮೇಲ್ವಿಚಾರಕಿ ಪ್ರಜ್ವತಾ ಕಾರ್ಯಕಾರಿ ಸಮಿತಿಯನ್ನು ರಚಿಸಿದರು. ಸುಮಾ ವಂದಿಸಿದರು.