ಉಡುಪಿ: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಜಯಕರ್ ಶೆಟ್ಟಿ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಪ್ರತಿಫಲವನ್ನು ಬಯಸದೆ ನಾವು ಮಾಡುವ ಪ್ರತಿಯೊಂದು ಸೇವೆಯೂ ಮುಂದೆ ನಮ್ಮ ಬದುಕಿನಲ್ಲಿ ದಾರಿ ದೀಪವಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಜೆ ಅವರು ಶುಭಹಾರೈಕೆಯ ನುಡಿಗಳನ್ನಾಡಿದರು. ಖ್ಯಾತ ರಂಗಕರ್ಮಿ ರವಿರಾಜ್ ಹೆಚ್ ಪಿ, ಪತ್ರಕರ್ತ ಜನಾರ್ದ‌ನ್ ಕೊಡವೂರು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಚಿರಂಜನ್ ಕೆ.ಶೇರಿಗಾರ್, ಡಾ.ಪ್ರಜ್ಞಾ ಮಾರ್ಪಳ್ಳಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಜಾ, ದಿಶಾ, ಚೈತನ್ಯ ಹಾಗೂ ದೀಪಕ್ ಕಾಮತ್ ಎಳ್ಳಾರೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ನಾಯಕಿ ಸೌಜನ್ಯಾ ಇವರು ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಪ್ರಜ್ಞಾ ಮಾರ್ಪಳ್ಳಿ ಇವರು ವಂದಿಸಿದರು. ಸಿಂಚನಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

By suddi9

Leave a Reply

Your email address will not be published. Required fields are marked *