ನೂತನ ಏಳು ಕೊಠಡಿಗಳ ಲೋಕಾರ್ಪಣೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲ ಇಲ್ಲಿ ನೂತನ ಏಳು ಕೊಠಡಿಗಳ ಲೋಕಾರ್ಪಣೆ, ಬಯಲು ರಂಗಮಂದಿರ ಮತ್ತು ಶಾಲಾ ಉದ್ಯಾನವನ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ನ.೧೦ ರಂದು ಶುಕ್ರವಾರ ನಡೆಯಿತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿ.ಇ.ಒ.ಮಂಜುನಾಥನ್ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಗ್ರಾ.ಪಂ.ಅಧ್ಯಕ್ಷರ ಕಡೆಗಣನೆ: ಗರಂ ಆದ ಗ್ರಾ.ಪಂ. ಅಧ್ಯಕ್ಷ;
ಬಾಳ್ತಿಲ ಸರಕಾರಿ ಶಾಲೆಯ ಸರಕಾರಿ ಕಾರ್ಯಕ್ರಮದಲ್ಲಿ ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರನ್ನು ಕಡೆಗಣಿಸಲಾಗಿದೆ ಎಂದು ಕಾರ್ಯಕ್ರಮದ ವೇಳೆ ಆರೋಪ ವ್ಯಕ್ತಪಡಿಸಿದ ಘಟನೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರು ನಿಗದಿತ ಸಮಯದಲ್ಲಿ ಹಾಜರಿದ್ದರು ಕೂಡ ಅವರ ಬಗ್ಗೆ ಕಾರ್ಯಕ್ರಮ ನಿರೂಪಕರು ಗಮನ ಹರಿಸದೆ ಹೆಸರು ಕರೆಯದೆ ಕಡೆಗಣನೆ ಮಾಡಿದ್ದಾರೆ. ಇದರಿಂದ ಕುಪಿತರಾದ ಅಧ್ಯಕ್ಷರು, ಶಾಲಾ ಕೊಠಡಿ ಉದ್ಘಾಟನೆ ವೇಳೆ ಕಾರ್ಯಕ್ರಮದಿಂದ ಹಿಂದೆ ಸರಿದು ನಿಂತ ಘಟನೆ ನಡೆಯಿತು.
ಇದನ್ನು ಗಮನಿಸಿದ ಸಂಘಟಕರು ಉದ್ಘಾಟನೆ ಸ್ಥಳಕ್ಕೆ ಬರುವಂತೆ ಒತ್ತಾಯ ಮಾಡಿದರು. ಆಯೋಜಕರು ಮನವೊಲಿಸುವ ಪ್ರಯತ್ನ ಮಾಡಿದರು.
ಆ ಸಂದರ್ಭದಲ್ಲಿ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ನಡೆದ ಘಟನೆಯಿಂದ ಆಗಿರುವ ಬೇಸರವನ್ನು ವ್ಯಕ್ತಪಡಿಸಿ,
ಬಳಿಕ ಕೊಠಡಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.