ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ. ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಂಟ್ವಾಳ ತಾಲೂಕಿನ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಡಾ. ಮನೋಹರ್ ರೈ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ
ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು.
ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ., ಸುಶ್ಮಿತಾ ಉಪಸ್ಥಿತರಿದ್ದರು.
ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು. ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.