Published On: Mon, Nov 13th, 2023

ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿಯ ಸದಸ್ಯ ಅಂಬಾ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ  ಕಯ್ಯಾರು ನಾರಾಯಣ ಭಟ್ ಮಾತನಾಡಿ ಪ್ರತಿಷ್ಠಾನದ ಸೇವಾ ಕಾರ್ಯಗಳು ನಿಸ್ವಾರ್ಥದಿಂದ ಕೂಡಿದ್ದು ಸದಸ್ಯರ ಬದ್ಧತೆಯಿಂದ ಉತ್ತಮ ಕಾರ್ಯಗಳು ನಡೆಯುವಂತಾಗಲಿ ಎಂದರಲ್ಲದೆ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ದಶಂಬರ 17 ರಂದು ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವವನ್ನು ನಡೆಸಲಾಗುವುದೆಂದರು.

ಪ್ರತಿಷ್ಠಾನದ ಬೆಳ್ತಂಗಡಿ ಘಟಕದ ಸಂಚಾಲಕ ವಸಂತ ಸುವರ್ಣ ಮತ್ತು ಉದಯಶಂಕರ ರೈ ಪುಣಚ ಉತ್ತರ ಭಾರತದ ತೀರ್ಥಕ್ಷೇತ್ರಗಳ ಯಾತ್ರೆಯ ಅನುಭವವನ್ನು ಹಂಚಿಕೊಂಡರು.

ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಮಾತನಾಡಿ ಯುವ ಪೀಳಿಗೆಗೆ ಮೌಲ್ಯಯುತ ಜೀವನ ನಡೆಸಲು ಹಿರಿಯರ ಅನುಭವದ ವಿನಿಯೋಗವಾಗಬೇಕೆಂದರು.

ಪ್ರತಿಷ್ಠಾನದ ಉಪಾಧ್ಯಕ್ಷ ಜಯರಾಮ ಭಂಡಾರಿ ಧರ್ಮಸ್ಥಳ ವಾರ್ಷಿಕೋತ್ಸವದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ವಿಚಾರ ವಿನಿಮಯ ಮಾಡಿದರು.

ಪ್ರತಿಷ್ಠಾನದ ಪದಾಧಿಕಾರಿಗಳಾದ ಅನಾರು ಕೃಷ್ಣಶರ್ಮ, ಭವಾನಿ ಶಂಕರ ಶೆಟ್ಟಿ ಪುತ್ತೂರು, ಮನಮೋಹನ ರಾವ್ ಬಿ.ಸಿ ರೋಡು, ಚಂದ್ರಶೇಖರ ಆಳ್ವ ಪಡುಮಲೆ, ಸೀತಾರಾಮ ಶೆಟ್ಟಿ ಉಜಿರೆ, ಸಂಜೀವ ಪಾರೆಂಕಿ, ರಾಘವ .ಎಚ್ ಗೇರುಕಟ್ಟೆ, ಗಣೇಶ ಭಟ್ ಕುತ್ರೊಟ್ಟು, ದೇವಳದ ಕಚೇರಿ ವ್ಯವಸ್ಥಾಪಕ ಗಿರೀಶ್ ಶೆಟ್ಟಿ ನಾಳ, ದ.ಕ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ತೆಂಕುತಿಟ್ಟಿನ ಹಿರಿಯ ಹಾಸ್ಯಗಾರ ಪೆರ್ವೊಡಿ ನಾರಾಯಣ ಭಟ್ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷ ದುಗ್ಗಪ್ಪ.ಯನ್ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter