ಕಬಡ್ಡಿ ಅಂಗಣಕ್ಕೆ ರಬ್ಬರ್ ಮ್ಯಾಟ್ : ನಳಿನ್ ಕುಮಾರ್
ಬಂಟ್ವಾಳ: ನಿರಂತರ ೩೮ ವರ್ಷಗಳಿಂದ ಕಬಡ್ಡಿ ಪಂದ್ಯಾಟ ನಡೆಸುತ್ತಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಬಡ್ಡಿ ಅಂಗಣದ ರಬ್ಬರ್ ಮ್ಯಾಟ್ ಒದಗಿಸಲಾಗುವುದು. ಗ್ರಾಮೀಣ ಯುವಕರು ದೇಶೀ ಕ್ರೀಡೆ ಕಬಡ್ಡಿ ಆಟದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ಅವರು ಭಾನುವಾರ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೯ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಂಜು ವಿಟ್ಲ ವೇದಿಕೆಯಲ್ಲಿ ನಡೆದ ಸ್ವಸ್ತಿಕ್ ಪ್ರೊ ಕಬಡ್ಡಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ದೈಹಿಕ, ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕಬಡ್ಡಿ ಇಂದು ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಕಬಡ್ಡಿಯಲ್ಲಿ ಜಿಲ್ಲೆಯ ಪ್ರತಿಭೆಗಳು ಹೆಚ್ಚು ಕಾಣುವಂತಾಗಲಿ. ಕಬಡ್ಡಿಗೆ ಪ್ರೋತ್ಸಾಹ ನೀಡುವ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಕ್ಲಬ್ ಸ್ಥಾಪಕಾಧ್ಯಕ್ಷ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ಕಬಡ್ಡಿ ಕ್ರೀಡೆ ಇನ್ನಷ್ಟು ಬೆಳೆಯುಂತಾಗಲು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಬಡ್ಡಿ ಸಮ್ಮೇಳನ ನಡೆಸಲಾಗುವುದು ಎಂದರು.
ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರ.ಕಾರ್ಯದರ್ಶಿ ರೇಣುಕಾರಾಧ್ಯ, ಪ್ರಗತಿಪರ ಕೃಷಿಕ ಜಯಚಂದ್ರ ಬೊಳ್ಮಾರು, ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಉಡುಪ, ಪ್ರಮುಖರಾದ ದೇವದಾಸ ಶೆಟ್ಟಿ, ದೇವಪ್ಪ ಪೂಜಾರಿ, ಡೊಂಬಯ ಅರಳ, ಪ್ರಭಾಕರ ಪ್ರಭು, ರವೀಶ್ ಶೆಟ್ಟಿ ಕಾರ್ಕಳ, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ ರೈ ಮಾಣಿ, ಉಮೇಶ್ ಡಿ.ಅರಳ, ನೃತ್ಯಗುರು ರಾಜೇಶ್ ಕಣ್ಣೂರು, ಹೇಮಚಂದ್ರ ಸಿದ್ದಕಟ್ಟೆ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲ ಪಿ., ಪದಾಧಿಕಾರಿಗಳಾದ ಜಯರಾಜ್ ಅತ್ತಾಜೆ, ಅಬ್ದುಲ್ ಹಮೀದ್ ಮಲ್ಪೆ, ಮಾಧವ ಬಂಗೇರ, ಪ್ರಭಾಕರ ಪಿ.ಎಂ., ರಫೀಕ್, ಹರೀಶ್, ರತ್ನಾಕರ ಪಿ.ಎಂ.,ಹರೀಶ್ಚಂದ್ರ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
ರತ್ನದೇವ್ ಪುಂಜಾಲಕಟ್ಟೆ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಪಿ.ಪುಂಜಾಲಕಟ್ಟೆ ಅವರು ವಂದಿಸಿದರು.