ಸುದ್ದಿ9 ಬಂಟ್ವಾಳ: ಸಿದ್ಧಕಟ್ಟೆ-ಕರ್ಪೆ ಜಿಲ್ಲಾ ಪಂಚಾಯತ್ ರಸ್ತೆಯನ್ನು ಮರುಡಾಮರೀಕರಣ ಮಾಡಲು ಆಗ್ರಹಿಸಿ ಕರ್ಪೆ ಸಂಪರ್ಕ ರಸ್ತೆ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳು ರಸ್ತೆ ಮಧ್ಯೆ ಗಂಜಿ ಬೇಯಿಸಿ ಊಟ ಮಾಡುವ ಮೂಲಕ ಮಂಗಳವಾರ ವಿಶಿಷ್ಠ ಪ್ರತಿಭಟನೆ ನಡೆಸಿದರು.

strike

strike1ಈ ರಸ್ತೆಯ ದುರಸ್ತಿ ಕಾರ್ಯ ನಡೆದು ಹಲವು ವರ್ಷಗಳೇ ಕಳೆದಿವೆ. ಸದ್ಯ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪ್ರತಿಭಟನೆಯ ನೇತೃತ್ವವಹಿಸಿದ್ದ ಸಮಿತಿಯ ಸದಸ್ಯರು ತಿಳಿಸಿದರು. ಮೂಡಬಿದ್ರೆ-ಬಿ.ಸಿ ರೋಡ್ ರಸ್ತೆಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಸ್ತೆಗೆ ಅಡ್ಡಲಾಗಿ ಮಲಗಿ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟುಹಿಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯ್ಕ್ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಸುಲೋಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *