ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ
ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.

ಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ನೀಡಲಾಯಿತು.

ಸಂಸ್ಥೆಯ ಶಿಕ್ಷಕಿಯಾದ ಭಾಗ್ಯಲಕ್ಷ್ಮಿ ಬಾಲ್ಯ ವಿವಾಹದಿಂದಾಗುವ ತೊಡಕುಗಳು, ಅದರಿಂದಾಗಿ ಸಮಾಜದಲ್ಲಿ ಉದ್ಭವಿಸಬಹುದಾದ ತೊಂದರೆಗಳು ಮೊದಲಾದ ವಿಷಯಗಳ ಕುರಿತು ಅರಿವು ಮೂಡಿಸಿದರು.
ಪ್ರೌಢಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ಪುರುಷೋತ್ತಮ್ ಅಂಚನ್, ಪ್ರೌಢಶಾಲಾ ವಿಭಾಗದ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಭೂಮಿಕ ಸ್ವಾಗತಿಸಿ, ಸಂಸ್ಥೆಯ ಶಿಕ್ಷಕಿ ಕವಿತಾ ವಂದಿಸಿದರು.