ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.

ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ.
ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟು ಮಾಡುತ್ತಿದ್ದ ಕಾರಣಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು.
ಅ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷಕರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ, ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.