ಕಾರಿಂಜ ಕ್ಷೇತ್ರದ ವಠಾರದಲ್ಲಿ ಪ್ಲೋಗ್ ಅಂಡ್ ವಾಕ್ ಅಭಿಯಾನ
ಬಂಟ್ವಾಳ: ವಿದ್ಯಾರ್ಥಿಗಳು ಪ್ರಕೃತಿಯನ್ನು ಉಳಿಸಲು ಹಾಗೂ ವ್ಯಕ್ತಿತ್ವ ವಿಕಸನಗೊಳಿಸಲು ಸ್ಟೂಡೆಂಟ್ಸ್ ಫಾರ್ ಡೆವಲಪ್ ಮೆಂಟ್ ಮಂಗಳೂರು ವಿಭಾಗದ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನವು ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ವಿವಿಧ ಕಾಲೇಜುಗಳಿಂದ ಸುಮಾರು 32 ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗವಹಿಸಿದರು.
ಕಾರಿಂಜೇಶ್ವರನಿಗೆ ಪೂಜೆಯನ್ನು ಸಲ್ಲಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ದೇವಸ್ಥಾನದ ಆವರಣದಲ್ಲಿನ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು.

ಈ ಸಂದರ್ಭ ಪರಿಸರವನ್ನು ಸ್ವಚ್ಛವಾಗಿ ಇರಿಸುವ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು.

ದೇವಳದ ಆಡಳಿತ ಸಮಿತಿಯ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರವೀಣ್ ಪೂಜಾರಿಯವರು ಅಭಿಯಾನದಲ್ಲಿ ಭಾಗವಹಿಸಿದರು.

ಸ್ಟೂಡೆಂಟ್ಸ್ ಫಾರ್ ಡೆವಲಪ್ ಮೆಂಟ್ ಪ್ರಮುಖರಾದ ನಿಶಾನ್ ಆಳ್ವ ಕಾವೂರು, ನಿಶ್ಚಿತ್ ಬಂಟ್ವಾಳ ಹಾಗೂ ಕ್ಯಾತ್ ಶೆಟ್ಟಿ ಅವರು ಉಪಸ್ಥಿತರಿದ್ದರು.