ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ಕುಂದಾಯಗೋಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ರವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಲೀಲಾವತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳಿಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಇವಾನಿಯಾ ಮಗುವಿನ ಪೋಷಕರು ಕುಕ್ಕರ್, ಲಕ್ಷಿತ್ ಮಗುವಿನ ಪೋಷಕರು ಗ್ಯಾಸ್ ಸ್ಟೋವ್ ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದರು.
ಪಂಚಾಯತ್ ಸದಸ್ಯೆ ಸುಜಾತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಚಂದ್ರಿಕಾ, ದಿನೇಶ್, ಸ್ತ್ರೀ ಶಕ್ತಿ ಸದಸ್ಯರು, ಮಕ್ಕಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಕಾರ್ಯಕರ್ತೆ ವಾರಿಜ ಕಾರ್ಯಕ್ರಮ ನಿರೂಪಿಸಿದರು, ಸಹಾಯಕಿ ಶೋಭಾ ಹಾಜರಿದ್ದರು.