ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಆಡಳಿತಕ್ಕೆ ನೂತನ ವ್ಯವಸ್ಥಾಪನ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಧನಂಜಯ ಶೆಟ್ಟಿ ನಾಡಬೆಟ್ಟು ಅವರು ಆಯ್ಕೆಯಾಗಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಮುಂದಿನ ಮೂರು ವರ್ಷಗಳ ಅವಧಿಗೆ ಈ ಆದೇಶ ಹೊರಡಿಸಿದ್ದಾರೆ.
ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಪ್ರಸ್ತುತ ದೇವಸ್ಥಾನದ ಅರ್ಚಕರನ್ನು ಮತ್ತು ಗಿರಿಧರ ನಾಯ್ಕ್, ವೇದಾವತಿ, ಸುರೇಖಾ, ಶಶಿಕಾಂತ ಶೆಟ್ಟಿ ಆರುಮುಡಿ, ಗಣೇಶ ಆಚಾರ್ಯ, ಎಚ್.ಶಾಂತಪ್ಪ ಪೂಜಾರಿ, ಎಸ್. ನರಸಿಂಹ ಐತಾಳ ಅವರನ್ನು ಆಯ್ಕೆ ಮಾಡಲಾಗಿದೆ.